‘ಸಲಾಂ ಸೋಲ್ಜರ್’ ಹಾಡು ರಿಲೀಸ್ ಮಾಡಿ, ಪುನೀತ್ಗೆ ಸರಿಸಾಟಿ ಯಾರೂ ಇಲ್ಲ ಎಂದ ಕಿಚ್ಚ ಸುದೀಪ್
‘ಜೇಮ್ಸ್’ ಸಿನಿಮಾದ ‘ಸಲಾಂ ಸೋಲ್ಜರ್..’ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಅವರು ವಿಶೇಷ ಮಾತುಗಳನ್ನು ಹೇಳಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಮತ್ತು ಕಿಚ್ಚ ಸುದೀಪ್ ನಡುವೆ ಬಾಲ್ಯದಿಂದಲೂ ಸ್ನೇಹ ಮನೆ ಮಾಡಿತ್ತು. ಅಪ್ಪು ಎಂದರೆ ಕಿಚ್ಚನಿಗೆ ಅಚ್ಚುಮೆಚ್ಚು. ಅದೇ ರೀತಿ ಸುದೀಪ್ ಬಗ್ಗೆ ಪುನೀತ್ ಅಭಿಮಾನ ಹೊಂದಿದ್ದರು. ಆದರೆ ಇಂದು ‘ಪವರ್ ಸ್ಟಾರ್’ ಇಲ್ಲ ಎಂಬ ಕೊರಗು ಎಲ್ಲರನ್ನೂ ಕಾಡುತ್ತಿದೆ. ಅವರ ಅನುಪಸ್ಥಿತಿಯಲ್ಲೇ ‘ಜೇಮ್ಸ್’ ಸಿನಿಮಾ ಬಿಡುಗಡೆ ಆಗಲು ಸಜ್ಜಾಗಿದೆ. ಮಾ.17ರಂದು ಅಪ್ಪು ಹುಟ್ಟುಹಬ್ಬದ ಪ್ರಯುಕ್ತ ದೇಶಾದ್ಯಂತ ಈ ಚಿತ್ರ ತೆರೆ ಕಾಣಲಿದೆ. ಅದಕ್ಕೂ ಮುನ್ನ ಹಾಡುಗಳು ಧೂಳೆಬ್ಬಿಸುತ್ತಿವೆ. ಇಂದು (ಮಾ.11) ಈ ಚಿತ್ರದ ಎರಡನೇ ಲಿರಿಕಲ್ ವಿಡಿಯೋವನ್ನು (Salaam Soldier Song) ಕಿಚ್ಚ ಸುದೀಪ್ ಅವರಿಂದ ಬಿಡುಗಡೆ ಮಾಡಿಸಲಾಗಿದೆ. ಹಾಡು ನೋಡಿ ಸುದೀಪ್ (Kichcha Sudeep) ಖುಷಿಪಟ್ಟಿದ್ದಾರೆ. ಇಡೀ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ದೊಡ್ಡ ಪರದೆಯಲ್ಲಿ ಪುನೀತ್ ಅವರ ಇರುವಿಕೆಯನ್ನು ಸಂಭ್ರಮಿಸುವ ಕಾಲ ಇದು. ಮುತ್ತಿನಂಥ ವ್ಯಕ್ತಿತ್ವದ ಅವರಿಗೆ ಬೇರೆ ಯಾರೂ ಸರಿಸಾಟಿ ಇಲ್ಲ. ಜೇಮ್ಸ್ ಸಿನಿಮಾದ ಪ್ರತಿ ಕ್ಷಣವನ್ನು ಎಂಜಾಯ್ ಮಾಡಿ’ ಎಂದು ಟ್ವೀಟ್ ಮಾಡಿದ್ದಾರೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ, ತೆಲುಗು ಹಾಗೂ ಹಿಂದಿಯಲ್ಲಿ ಈ ಲಿರಿಕಲ್ ವಿಡಿಯೋ ಬಿಡುಗಡೆ ಆಗಿದ್ದು, ಅದರ ಲಿಂಕ್ಗಳನ್ನು ಸುದೀಪ್ ಶೇರ್ ಮಾಡಿದ್ದಾರೆ. ಆ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಸಂಜಿತ್ ಹೆಗಡೆ ಮತ್ತು ಚರಣ್ ರಾಜ್ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಕಿಶೋರ್ ಪತ್ತಿಕೊಂಡ ಈ ಚಿತ್ರ ನಿರ್ಮಾಪಕರು. ಪುನೀತ್ಗೆ ಜೋಡಿಯಾಗಿ ಪ್ರಿಯಾ ಆನಂದ್ ನಟಿಸಿದ್ದಾರೆ.
ಇದನ್ನೂ ಓದಿ:
Salaam Soldier: ‘ಜೇಮ್ಸ್’ ಹೊಸ ಹಾಡು ‘ಸಲಾಂ ಸೋಲ್ಜರ್’ ರಿಲೀಸ್; ಸಲಾಂ ಪುನೀತ್ ಎಂದ ಅಪ್ಪು ಫ್ಯಾನ್ಸ್
ಯೋಗಿ ಕಿವಿಗೆ ಏಟು ಬಿದ್ದಾಗ ಪುನೀತ್ ಏನು ಮಾಡಿದ್ರು? ‘ಹುಡುಗರು’ ಘಟನೆ ನೆನೆದ ರವಿ ವರ್ಮಾ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

