‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ
‘ಮಾರ್ಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಾಣುತ್ತಿದೆ. ಈ ಚಿತ್ರದ ಸಕ್ಸಸ್ ಮೀಟ್ನ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸುದೀಪ್ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕಲೆಕ್ಷನ್ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.
‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್ಟೇನ್ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

