‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ

Updated on: Dec 27, 2025 | 4:26 PM

‘ಮಾರ್ಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಮೀರಿ ಸಿನಿಮಾ ಗೆಲುವು ಕಾಣುತ್ತಿದೆ. ಈ ಚಿತ್ರದ ಸಕ್ಸಸ್​ ಮೀಟ್​​ನ ಆಯೋಜನೆ ಮಾಡಲಾಗಿತ್ತು. ಈ ವೇಳೆ ಸುದೀಪ್ ಅವರು ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಕಲೆಕ್ಷನ್ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More