AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕರ್ಷಕವಾಗಿದೆ ‘ಬಿಗ್ ಬಾಸ್’ ಟ್ರೋಫಿ; ವೇದಿಕೆ ಮೇಲೆ ಅನಾವರಣ ಮಾಡಿದ ಸುದೀಪ್

ಆಕರ್ಷಕವಾಗಿದೆ ‘ಬಿಗ್ ಬಾಸ್’ ಟ್ರೋಫಿ; ವೇದಿಕೆ ಮೇಲೆ ಅನಾವರಣ ಮಾಡಿದ ಸುದೀಪ್

ರಾಜೇಶ್ ದುಗ್ಗುಮನೆ
|

Updated on:Jan 22, 2024 | 8:37 AM

Share

ಟ್ರೋಫಿ ನೋಡಿ ಸ್ಪರ್ಧಿಗಳು ಸಖತ್ ಖುಷಿಪಟ್ಟಿದ್ದಾರೆ. ಈ ಕಪ್ ಯಾರು ಗೆಲ್ಲುತ್ತಾರೆ ಅನ್ನೋದಕ್ಕೆ ಈ ವೀಕೆಂಡ್​ನಲ್ಲಿ ಉತ್ತರ ಸಿಗಲಿದೆ.

ಬಿಗ್ ಬಾಸ್ ಟ್ರೋಫಿ ಯಾವ ರೀತಿಯಲ್ಲಿ ಇರಲಿದೆ ಎನ್ನುವ ಕುತೂಹಲ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಈ ಸೀಸನ್​ನ ಕೊನೆಯ ‘ಸೂಪರ್ ಸಂಡೇ ವಿತ್ ಸುದೀಪ’ ಕಾರ್ಯಕ್ರಮದಲ್ಲಿ ಸುದೀಪ್ (Sudeep) ಅವರು ಟ್ರೋಫಿ ಅನಾವರಣ ಮಾಡಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷದ ಟ್ರೋಫಿ ಸಾಕಷ್ಟು ಆಕರ್ಷಕವಾಗಿದೆ. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಟ್ರೋಫಿ ನೋಡಿ ಸ್ಪರ್ಧಿಗಳು ಸಖತ್ ಖುಷಿಪಟ್ಟಿದ್ದಾರೆ. ಈ ಕಪ್ ಯಾರು ಗೆಲ್ಲುತ್ತಾರೆ ಅನ್ನೋದಕ್ಕೆ ಈ ವೀಕೆಂಡ್​ನಲ್ಲಿ ಉತ್ತರ ಸಿಗಲಿದೆ. ಈ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಜನವರಿ 21ರಂದು ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 22, 2024 08:02 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More