‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

Updated on: Dec 14, 2025 | 1:25 PM

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಈ ಮೊದಲು ಅವರು ಅಭಿನಯಿಸಿದ್ದ ‘ಮ್ಯಾಕ್ಸ್’ ಚಿತ್ರದಲ್ಲೂ ಹೀರೋಯಿನ್ ಇರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಕಿಚ್ಚ ಸುದೀಪ್ ಅವರು ವಿವರಿಸಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ (Mark Movie) ಡಿಸೆಂಬರ್ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಈ ಮೊದಲು ಅವರು ಅಭಿನಯಿಸಿದ್ದ ‘ಮ್ಯಾಕ್ಸ್’ ಚಿತ್ರದಲ್ಲೂ ಹೀರೋಯಿನ್ ಇರಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಕಿಚ್ಚ ಸುದೀಪ್ (Kichcha Sudeep) ಅವರು ವಿವರಿಸಿದ್ದಾರೆ. ಕಥೆಯಲ್ಲಿ ಹೀರೋಯಿನ್ ಪಾತ್ರಕ್ಕೆ ಮಹತ್ವ ಇರಬೇಕು. ನಾಯಕ ನಟಿ ಸುಮ್ಮನೇ ಒಂದು ಪ್ರಾಪರ್ಟಿ ರೀತಿ ಆಗಬಾರದು ಎಂದು ಸುದೀಪ್ ಹೇಳಿದ್ದಾರೆ. ‘ಮ್ಯಾರ್ಕ್’ ಸಿನಿಮಾದ ಕೆಲಸವನ್ನು ಬಹಳ ಬೇಗ ಮುಗಿಸಲಾಗಿದೆ. ಆ ಬಗ್ಗೆ ಕೂಡ ಸುದೀಪ್ ಮಾತನಾಡಿದ್ದಾರೆ. ಟಿವಿ9 ನಡೆಸಿದ ವಿಶೇಷ ಸಂದರ್ಶನದ (Sudeep Interview) ಒಂದು ತುಣುಕು ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More