‘ವಿಕ್ರಾಂತ್ ರೋಣ’ ರಿಲೀಸ್ ಸಮಯದಲ್ಲಿ ಸುದೀಪ್ಗೆ ಸ್ಟ್ರೆಸ್ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Vikrant Rona | Kichcha Sudeep: ‘ವಿಕ್ರಾಂತ್ ರೋಣ ನಮ್ಮ ಹೃದಯಕ್ಕೆ ಹತ್ತಿರವಾದ ಸಿನಿಮಾ. ಜನರು ಅದನ್ನು ಹೇಗೆ ಸ್ವೀಕರಿಸಿದರೂ ನಾವು ಒಪ್ಪಿಕೊಳ್ಳುತ್ತೇವೆ’ ಎಂದು ಸುದೀಪ್ ಹೇಳಿದ್ದಾರೆ.
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾದಿದ್ದಾರೆ. ಜುಲೈ 28ರಂದು ಈ ಚಿತ್ರ ಅದ್ದೂರಿಯಾಗಿ ತೆರೆಕಾಣಲಿದೆ. ಕಿಚ್ಚ ಸುದೀಪ್ (Kichcha Sudeep) ಅವರ ವೃತ್ತಿಜೀವನದಲ್ಲಿ ಇದು ತುಂಬ ಡಿಫರೆಂಟ್ ಸಿನಿಮಾ. ಇಡೀ ಚಿತ್ರ 3ಡಿಯಲ್ಲಿ ಮೂಡಿಬಂದಿದ್ದು, ದೇಶಾದ್ಯಂತ ಬೇರೆ ಬೇರೆ ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಸುದೀಪ್ ಅವರಿಗೆ ಏನಾದರೂ ಒತ್ತಡ ಎನಿಸುತ್ತಿದೆಯೇ? ಖಂಡಿತಾ ಇಲ್ಲ. ತಾವು ಕೂಲ್ ಆಗಿರುವುದು ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ. ‘ವಿಕ್ರಾಂತ್ ರೋಣ ನಮ್ಮ ಹೃದಯಕ್ಕೆ ಹತ್ತಿರವಾದ ಸಿನಿಮಾ. ಜನರು ಅದನ್ನು ಹೇಗೆ ಸ್ವೀಕರಿಸಿದರೂ ನಾವು ಒಪ್ಪಿಕೊಳ್ಳುತ್ತೇವೆ’ ಎಂದು ಸುದೀಪ್ ಹೇಳಿದ್ದಾರೆ. ಜಾಕ್ ಮಂಜು (Jack Manju) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

