ಗಿಲ್ಲಿ ನಟನಿಗೆ ಬರುತ್ತಾ ಈ ಪರಿಸ್ಥಿತಿ? ಕಾವ್ಯ ಎದುರಲ್ಲೇ ಸೂಚನೆ ಕೊಟ್ಟ ಸುದೀಪ್

Updated on: Oct 26, 2025 | 6:25 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಈಗಾಗಲೇ ಕ್ಲೀನ್ ಶೇವ್ ಮಾಡಿಕೊಂಡಿದ್ದಾರೆ. ಆ ವಿಷಯದ ಬಗ್ಗೆ ಕಿಚ್ಚ ಸುದೀಪ್ ಅವರು ತಮಾಷೆ ಮಾಡಿದ್ದಾರೆ. ಗಿಲ್ಲಿ ನಟನ ಹಲವು ಬಗೆಯ ಗೆಟಪ್​ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅದೇ ರೀತಿ ಮಾಡೋಣವೇ ಎಂದು ಸುದೀಪ್ ಅವರು ಕೇಳಿದ್ದಾರೆ.

ಸದ್ಯಕ್ಕಂತೂ ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಹೈಲೈಟ್ ಆಗುತ್ತಿದ್ದಾರೆ. ಭಾನುವಾರದ (ಅ.26) ಸಂಚಿಕೆಯಲ್ಲಿ ಅವರ ಬಗ್ಗೆಯೇ ಹೆಚ್ಚು ಚರ್ಚೆ ಆಗಲಿದೆ. ಕಿಚ್ಚ ಸುದೀಪ್ ಅವರು ಕೆಲವು ಮೀಮ್​​ಗಳನ್ನು ತೋರಿಸಿದ್ದಾರೆ. ಅದರಲ್ಲಿ ಗಿಲ್ಲಿ ನಟನ ಹಲವು ಬಗೆಯ ಗೆಟಪ್​ಗಳು ಇವೆ. ಒಂದಷ್ಟು ಫೋಟೋ ತೋರಿಸಿ, ‘ನೀವು ಓಕೆ ಎಂದರೆ ಈ ಗೆಟಪ್ ಕೂಡ ಮಾಡಿಸೋಣ’ ಎಂದು ಕಿಚ್ಚ ಸುದೀಪ್ (Kichcha Sudeep) ಹೇಳಿದ್ದಾರೆ. ಫೋಟೋಗಳನ್ನು ನೋಡಿ ಕಾವ್ಯ ಶೈವ ಅವರು ಬಿದ್ದು ಬಿದ್ದು ನಕ್ಕಿದ್ದಾರೆ. ಗಿಲ್ಲಿಗೆ ಇಂಥ ಗೆಟಪ್ ಓಕೆ ಎಂದು ಕಾವ್ಯ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More