ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ ಸುದೀಪ್

Updated on: Sep 20, 2026 | 11:03 AM

ಬಿಗ್​ ಬಾಸ್ ಮನೆಗೆ ಬಂದ ಜನ ಸಾಮಾನ್ಯ ಸ್ಪರ್ಧಿಗಳ ವರ್ತನೆ ಮಿತಿ ಮೀರಿದೆ. ಮಾತಿನ ಭರದಲ್ಲಿ ಬೇರೆಯವರ ವ್ಯಕ್ತಿತ್ವಕ್ಕೆ ಚ್ಯುತಿ ಬರುವ ರೀತಿಯಲ್ಲಿ ಮಂಜ ನಡೆದುಕೊಂಡಿದ್ದಾರೆ. ಇದನ್ನು ಕಿಚ್ಚ ಸುದೀಪ್ ಅವರು ಖಂಡಿಸಿದ್ದಾರೆ. ಸೌಂದರ್ಯಾ ಶೆಟ್ಟಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಮಂಜನಿಗೆ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಅಗ್ನಿ ಪರೀಕ್ಷೆ ಮೂಲಕ ಬಿಗ್​ ಬಾಸ್ ಮನೆಗೆ ಬಂದ ಜನ ಸಾಮಾನ್ಯ ಸ್ಪರ್ಧಿಗಳ ವರ್ತನೆ ಮಿತಿ ಮೀರಿದೆ. ಮಾತಿನ ಭರದಲ್ಲಿ ಬೇರೆಯವರ ವ್ಯಕ್ತಿತ್ವಕ್ಕೆ ಚ್ಯುತಿ ಬರುವ ರೀತಿಯಲ್ಲಿ ಅವರು ನಡೆದುಕೊಂಡಿದ್ದಾರೆ. ಇದನ್ನು ಕಿಚ್ಚ ಸುದೀಪ್ ಅವರು ಖಂಡಿಸಿದ್ದಾರೆ. ಸೌಂದರ್ಯಾ ಶೆಟ್ಟಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಮಂಜನಿಗೆ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ‘ರೊಮ್ಯಾನ್ಸ್ ಮಾಡೋಕೆ, ಕೈ-ಕೈ ಹಿಡಿದುಕೊಂಡು ಓಡಾಡೋಕೆ ನಾನು ಬಂದಿಲ್ಲ. ಈ ರೀತಿ ಮಾಡಿದರೆ ಕ್ಯಾರೆಕ್ಟರ್ ಇಲ್ಲದವರು ಅಂತ ಹೇಳ್ತಾರೆ’ ಎಂದು ಮಂಜ ಹೇಳಿದ್ದರು. ಆ ಮಾತು ಕೇಳಿ ಸೌಂದರ್ಯಾ ಶೆಟ್ಟಿ ಕಣ್ಣೀರು ಹಾಕಿದ್ದರು. ‘ಮಾತಿನ ಮೇಲೆ ನಿಗಾ ಇರಲಿ’ ಎಂದು ಮಂಜನಿಗೆ ಕಿಚ್ಚ ಸುದೀಪ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಮೊದಲು ಶನಿವಾರದ ಸಂಚಿಕೆಯಲ್ಲಿ ಕೂಡ ಸುದೀಪ್ ಅವರು ಖಾರವಾಗಿ ಮಾತನಾಡಿ, ಕಾಮನರ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More