Vikranth Rona Press Meet: ಸುದೀಪ್ ಜತೆ ‘ವಿಕ್ರಾಂತ್ ರೋಣ’ ಟ್ರೇಲರ್ ನೋಡಲು ಬಂದ ಸೆಲೆಬ್ರಿಟಿಗಳು; ಇಲ್ಲಿದೆ ಲೈವ್ ವಿಡಿಯೋ
Vikranth Rona | Kichcha Sudeep: ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್ ರೋಣ’ ಚಿತ್ರದ ಸುದ್ದಿಗೋಷ್ಠಿಗೆ ಬಂದಿದ್ದಾರೆ. ಸುದೀಪ್ ಜತೆ ಕುಳಿತು ಅವರೆಲ್ಲರೂ ಟ್ರೇಲರ್ ಕಣ್ತುಂಬಿಕೊಳ್ಳಲಿದ್ದಾರೆ.
ಕಿಚ್ಚ ಸುದೀಪ್ (Kichcha Sudeep) ನಟನೆಯ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಸಜ್ಜಾಗುತ್ತಿದೆ. ಟ್ರೇಲರ್ ರಿಲೀಸ್ಗೆ ಕೌಂಟ್ಡೌನ್ ಶುರು ಆಗಿದೆ. ಅದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ (Vikranth Rona Press Meet) ಮಾಡಲಾಗುತ್ತಿದೆ. ಈ ಸುದ್ದಿಗೋಷ್ಠಿಯಲ್ಲಿ ‘ವಿಕ್ರಾಂತ್ ರೋಣ’ ಟ್ರೇಲರ್ (Vikranth Rona Trailer) ಬಿತ್ತರ ಆಗಲಿದೆ. ಅದನ್ನು ನೋಡಲು ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದಿದ್ದಾರೆ. ಈ ಸಿನಿಮಾದಲ್ಲಿ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ ಮುಂತಾದವರು ನಟಿಸಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿದ್ದು, ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜುಲೈ 28ಕ್ಕೆ ‘ವಿಕ್ರಾಂತ್ ರೋಣ’ ರಿಲೀಸ್ ಆಗಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

