ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು

Updated on: Jun 16, 2024 | 8:15 PM

ರೇಣುಕಾ ಸ್ವಾಮಿ ಅವರ ಸಾವಿಗೆ ನ್ಯಾಯ ಸಿಗಬೇಕು ಎಂದು ಕಿಚ್ಚ ಸುದೀಪ್​ ಒತ್ತಾಯಿಸಿದ್ದಾರೆ. ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿರುವ ಕೊಲೆ ಪ್ರಕರಣದಲ್ಲಿ ಪವಿತ್ರಾ ಎ1, ದರ್ಶನ್​ ಎ2 ಆಗಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಸುದೀಪ್​ ಹೇಳಿದ್ದಾರೆ. ಬಿಗ್​ ಬಾಸ್​ ಮಾಜಿ ಸ್ಪರ್ಧಿ ಕಾರ್ತಿಕ್​ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಸುದ್ದಿಗೋಷ್ಠಿಗೆ ಸುದೀಪ್​ ಅವರು ಅತಿಥಿಯಾಗಿ ಬಂದಿದ್ದರು. ಈ ವೇಳೆ ದರ್ಶನ್​ ಪ್ರಕರಣದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸುದೀಪ್​ ಉತ್ತರಿಸಿದರು.

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಹತ್ಯೆಯ ಬಗ್ಗೆ ನಟ ಕಿಚ್ಚ ಸುದೀಪ್​ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕೇಸ್​ನಲ್ಲಿ ನಟ ದರ್ಶನ್ (Darshan)​, ನಟಿ ಪವಿತ್ರಾ ಗೌಡ ಸೇರಿದಂತೆ ಅನೇಕ ಆರೋಪಿಗಳು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ತನಿಖೆ ನಡೆಯುತ್ತಿರುವ ರೀತಿಯ ಬಗ್ಗೆ ಸುದೀಪ್​ ಅವರು ಮಾತನಾಡಿದ್ದಾರೆ. ಪೊಲೀಸರ ಕೆಲಸಕ್ಕೆ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊಲೆಯಾದ ರೇಣುಕಾ ಸ್ವಾಮಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸುದೀಪ್​ ಒತ್ತಾಯಿಸಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಅವರು ನಟನಾಗಿ ಮಾತ್ರವಲ್ಲದೇ ಬಿಗ್​ ಬಾಸ್​ ನಿರೂಪಕನಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಶೋ ಮುಗಿದ ನಂತರವೂ ಅವರು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೆಂಬಲ ನೀಡುತ್ತಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ವಿಜೇತ ಕಾರ್ತಿಕ್​ ಮಹೇಶ್​ ನಟನೆಯ ಹೊಸ ಸಿನಿಮಾಗೆ ಶುಭ ಕೋರಲು ಕಿಚ್ಚ ಸುದೀಪ್​ ಇಂದು (ಜೂನ್​ 16) ಮುಖ್ಯ ಅತಿಥಿಯಾಗಿ ಬಂದಿದ್ದರು. ‘ರಾಮರಸ’ ಸಿನಿಮಾದ ಸುದ್ದಿಗೋಷ್ಠಿ ಬಳಿಕ ಸುದೀಪ್​ ಅವರು ದರ್ಶನ್​ ಕುರಿತು ಮಾತನಾಡಿದರು. ಅಲ್ಲದೇ, ಚಿತ್ರರಂಗದ ಸಮಸ್ಯೆಗಳ ಬಗ್ಗೆಯೂ ತಮ್ಮ ಅನಿಸಿಕೆ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More