‘ಕೆಡಿ’ ವಿಳಂಬ ಆಗಿದ್ದೇಕೆ? ಪ್ರೇಮ್ ಪರವಾಗಿ ನಿಂತ ಸುದೀಪ್

Updated on: Apr 28, 2026 | 12:51 PM

ಕಿಚ್ಚ ಸುದೀಪ್ ಅವರು ‘ಕೆಡಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಕೇವಲ 3 ದಿನ ಶೂಟ್​​ನಲ್ಲಿ ಅವರು ಭಾಗಿ ಆಗಿದ್ದರು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಪ್ರೇಮ್ ಅವರು ಕೆಡಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಸಿನಿಮಾ ವಿಳಂಬ ಆದ ವಿಷಯವೂ ಚರ್ಚೆಗೆ ಬಂದಿದೆ. ಸುದೀಪ್ ಅವರು ಪ್ರೇಮ್ ಪರವಾಗಿ ಮಾತನಾಡಿದರು.

ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿತ್ತು. ಇಷ್ಟು ವಿಳಂಬ ಏಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಸೆಟ್ ನಿರ್ಮಾಣ, ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಕೆಲಸ ಹೀಗೆ ವಿವಿಧ ಕಾರಣಕ್ಕೆ ‘ಕೆಡಿ’ ಸಿನಿಮಾ ವಿಳಂಬ ಆಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More