ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

Updated on: Jan 03, 2026 | 12:36 PM

Bigg Boss Promo: ಬಿಗ್ ಬಾಸ್ ಪೂರ್ಣಗೊಳ್ಳುತ್ತಾ ಬಂದ ಹಾಗೆ ಎಲ್ಲಾ ಸ್ಪರ್ಧಿಗಳ ಮಧ್ಯೆ ಬಾಂಧವ್ಯ ಬೆಳೆಯುತ್ತದೆ. ಎಲ್ಲರೂ ಒಟ್ಟಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ, ಅಶ್ವಿನಿ ಗೌಡ ಹಾಗೂ ಗಿಲ್ಲಿ ವಿಷಯದಲ್ಲಿ ಹಾಗಾಗಿಲ್ಲ. ಇವರು ಕಿತ್ತಾಡಿಕೊಳ್ಳುತ್ತಲೇ ಇದ್ದಾರೆ. ಈಗ ಸುದೀಪ್ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ.

ಸೀಸನ್ ಪೂರ್ಣಗೊಳ್ಳುವಾಗ ಬಿಗ್ ಬಾಸ್ ಮನೆ ಆನಂದ ಸಾಗರ ಆಗುತ್ತದೆ. ಆದರೆ, ಗಿಲ್ಲಿ ನಟ ಹಾಗೂ ಅಶ್ವಿನಿ ವಿಷಯದಲ್ಲಿ ಆ ರೀತಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಿಷಯ ಸುದೀಪ್ ಅಸಮಾಧಾನಕ್ಕೆ ಕಾರಣ ಆಗಿದೆ. ವೀಕೆಂಡ್​​​ನಲ್ಲಿ ಈ ವಿಷಯ ಪ್ರಮುಖ ಚರ್ಚೆಯ ವಿಷಯದಂತೆ ತೋರುತ್ತಿದೆ. ಆ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 03, 2026 12:35 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More