‘ನನ್ನ ಸಿನಿಮಾದಲ್ಲೇ ನಾನು ಡ್ಯಾನ್ಸ್ ಮಾಡಲ್ಲ’; ಆ್ಯಂಕರ್ ಬೇಡಿಕೆಗೆ ಸುದೀಪ್ ಉತ್ತರ

Updated on: Mar 15, 2023 | 7:44 AM

‘ಕಬ್ಜ’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಿದೆ. ಆಗ ಸುದೀಪ್​ ಬಳಿ ಡ್ಯಾನ್ಸ್ ಮಾಡುವಂತೆ ಆ್ಯಂಕರ್ ಒತ್ತಾಯ ಮಾಡಿದರು.

‘ಕಬ್ಜ’ ಚಿತ್ರದ (Kabzaa Movie) ಪ್ರೀ-ರಿಲೀಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಿದೆ. ಮಂಗಳವಾರ (ಮಾರ್ಚ್​ 14) ಸಂಜೆ ನಡೆದ ಕಾರ್ಯಕ್ರಮದಲ್ಲಿ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು. ಸುದೀಪ್​, ಉಪೇಂದ್ರ, ನಿರ್ಮಾಪಕ ಕೆ.ಪಿ. ಶ್ರೀಕಾಂತ್ (KP Srikanth) ಮೊದಲಾದವರು ವೇದಿಕೆ ಏರಿದ್ದರು. ಆಗ ಸುದೀಪ್​ ಬಳಿ ಡ್ಯಾನ್ಸ್ ಮಾಡುವಂತೆ ಆ್ಯಂಕರ್ ಒತ್ತಾಯ ಮಾಡಿದರು. ಇದಕ್ಕೆ ಉತ್ತರಿಸಿದ ಕಿಚ್ಚ, ‘ನನ್ನ ಸಿನಿಮಾದಲ್ಲೇ ನಾನು ಡ್ಯಾನ್ಸ್ ಮಾಡಲ್ಲ. ಇವರ ಸಿನಿಮಾಗೆ ಏಕೆ ಮಾಡ್ಲಿ’ ಎಂದು ಪ್ರಶ್ನೆ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More