ರಕ್ಷಿತಾ ಹಾಗೂ ಗಿಲ್ಲಿಗೆ ಕ್ಲಾಸ್ ಫಿಕ್ಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

Updated on: Nov 15, 2025 | 1:18 PM

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರು ಈ ವಾರ ಲಯ ತಪ್ಪಿದ್ದರು. ಇದಕ್ಕೆ ಕಾರಣ ಆಗಿದ್ದು ಗಿಲ್ಲಿ ನಟ ಎಂಬ ಮಾತೂ ಇದೆ. ಹೀಗಿರುವಾಗಲೇ ಪ್ರೋಮೋ ರಿಲೀಸ್ ಆಗಿದ್ದು, ಯಾರಿಗೆ ಪಾಠ ಹೇಳಲಾಗುತ್ತಿದೆ ಎಂಬುದರ ಸ್ಪಷ್ಟ ಚಿತ್ರಣ ನೀಡಲಾಗಿದೆ .

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದರಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಕುತಂತ್ರ ಮಾಡಿದ್ದರು. ರಕ್ಷಿತಾನ ತಮ್ಮ ತಂಡದ ವಿರುದ್ಧವೇ ಎತ್ತಿ ಕಟ್ಟಿದ್ದರು. ಇದೇ ವಿಷಯ ಇಟ್ಟುಕೊಂಡು ಸುದೀಪ್ ಮಾತನಾಡುವುದು ಬಹುತೇಕ ಖಚಿತವಾಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More