ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ

ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 28, 2022 | 7:27 PM

ಬಾಲಿವುಡ್ ಹಾಗೂ ಹಾಲಿವುಡ್​ನಲ್ಲೂ ಕೆಟ್ಟ ಸಿನಿಮಾಗಳು ಬರುತ್ತವೆ ಎಂಬುದು ಸುದೀಪ್ ಅಭಿಪ್ರಾಯ. ಈ ಬಗ್ಗೆ ಅವರು ಸವಿಸ್ತಾರವಾಗಿ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ​ (Kichcha Sudeep) ನಟನೆಯ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಹಲವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜ್ಯಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಕೆಲವರು ಇದನ್ನು ಹಾಲಿವುಡ್ ಸಿನಿಮಾಗಳಿಗೆ ಹೋಲಿಕೆ ಮಾಡಿದ್ದಾರೆ. ಆದರೆ, ಇದು ಕಿಚ್ಚ ಸುದೀಪ್​ಗೆ ಇಷ್ಟ ಆಗುವುದಿಲ್ಲ. ಕನ್ನಡದ ಸಿನಿಮಾಗಳನ್ನು ಪರಭಾಷೆಗೆ ಹೋಲಿಕೆ ಮಾಡಿದರೆ ಅವರಿಗೆ ಸಿಟ್ಟು ಬರುತ್ತದೆ. ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ಬಾಲಿವುಡ್ ಹಾಗೂ ಹಾಲಿವುಡ್​ನಲ್ಲೂ ಕೆಟ್ಟ ಸಿನಿಮಾಗಳು ಬರುತ್ತವೆ ಎಂಬುದು ಸುದೀಪ್ ಅಭಿಪ್ರಾಯ. ಈ ಬಗ್ಗೆ ಅವರು ಸವಿಸ್ತಾರವಾಗಿ ಮಾತನಾಡಿದ್ದಾರೆ. ಅವರು ಹೇಳಿದ ಮಾತುಗಳು ಈ ವಿಡಿಯೋದಲ್ಲಿದೆ.

ಇದನ್ನೂ ಓದಿ: Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

Published on: Jun 28, 2022 02:57 PM