ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
‘ಮಾರ್ನಮಿ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ರಿತ್ವಿಕ್ ಅವರು ನಟಿಸಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್ನಲ್ಲಿ ಕಿಚ್ಚ ಸುದೀಪ್ ಅವರ ಧ್ವನಿ ಗಮನ ಸೆಳೆದಿದೆ. ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಬಂದ ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದರು. ವಿಡಿಯೋ ನೋಡಿ..
ಕರಾವಳಿ ಸೊಗಡಿನ ಸಿನಿಮಾಗಳು ಪ್ರೇಕ್ಷಕರ ಮೆಚ್ಚುಗೆ ಗಳಿಸುತ್ತಿವೆ. ಈಗ ‘ಮಾರ್ನವಿ’ ಸಿನಿಮಾ (Maarnami Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ರಿತ್ವಿಕ್ ಅವರು ನಟಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಟ್ರೇಲರ್ನಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರ ಧ್ವನಿ ಗಮನ ಸೆಳೆದಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದ ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದರು. ‘ಮಾರ್ನವಿ’ ಸಿನಿಮಾದಲ್ಲಿ ಹುಲಿವೇಷದ ಕುರಿತ ಕಥೆ ಇದೆ. ಹುಲಿವೇಷದ ಹಿಂದಿರುವ ಆಚಾರ, ಸಂಪ್ರದಾಯಗಳ ಬಗ್ಗೆ ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಚೈತ್ರಾ ಜೆ. ಆಚಾರ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಸೋನು ಗೌಡ, ಪ್ರಕಾಶ್ ತುಮ್ಮಿನಾಡು, ಸುಮನ್, ಜ್ಯೋತಿಶ್ ಶೆಟ್ಟಿ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ರಿಶಿತ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ನೀಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

