Vikrant Rona: ‘ವಿಕ್ರಾಂತ್ ರೋಣ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಯಾವಾಗ? ಪ್ಲ್ಯಾನ್ ಬಗ್ಗೆ ವಿವರ ನೀಡಿದ ಸುದೀಪ್
Vikrant Rona Pre-release event: ‘ವಿಕ್ರಾಂತ್ ರೋಣ’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಲಿದೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮಾಹಿತಿ ಹಂಚಿಕೊಂಡಿದ್ದಾರೆ.
ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾ ಜುಲೈ 28ರಂದು ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಪ್ರೀ-ರಿಲೀಸ್ ಇವೆಂಟ್ಗೆ (Vikrant Rona Pre-release event) ಪ್ಲ್ಯಾನ್ ಮಾಡಲಾಗುತ್ತಿದೆ. ‘ಜುಲೈ 25ಕ್ಕೆ ಪ್ರೀ-ರಿಲೀಸ್ ಕಾರ್ಯಕ್ರಮ ಮಾಡಬೇಕು ಅಂತ ಅಂದುಕೊಂಡಿದ್ದೇವೆ. ಒಂದೆರಡು ದಿನ ಆಚೀಚೆ ಆಗಬಹುದು. ಆ ಸಮಯದಲ್ಲಿ ನೀವೆಲ್ಲರೂ ಬಿಡುವು ಮಾಡಿಕೊಂಡಿರಿ. ಬೇರೆ ಕಡೆಗಳಲ್ಲಿ ಪ್ರಚಾರ ಕಾರ್ಯ ಮುಗಿಸಿಕೊಂಡು ಮತ್ತೆ ನಮ್ಮ ಊರಿಗೆ, ನಮ್ಮ ಜನರ ಬಳಿ ಬರುತ್ತೇನೆ. ವಿಕ್ರಾಂತ್ ರೋಣ ಪ್ರೀ ರಿಲೀಸ್ ಇವೆಂಟ್ನಲ್ಲಿ ಎಲ್ಲರೂ ಭಾಗಿ ಆಗೋಣ’ ಎಂದು ಕಿಚ್ಚ ಸುದೀಪ್ (Kichcha Sudeep) ಹೇಳಿದ್ದಾರೆ. ಈ ಚಿತ್ರವನ್ನು ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

