ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಸ್ಪೆಷಲ್ ವಿಡಿಯೋ
ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಡಿಸೆಂಬರ್ 15ರಂದು ತೆರೆಕಂಡಿತ್ತು. ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತಸದಲ್ಲಿ ಸುದೀಪ್ ಅವರು ವಿಡಿಯೋ ಹಂಚಿಕೊಂಡು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯದಲ್ಲಿ ಕೂಡ ಸಿನಿಮಾ ಗೆಲ್ಲಿಸಿದ ಪ್ರೇಕ್ಷಕರಿಗೆ ಸುದೀಪ್ ಧನ್ಯವಾದ ತಿಳಿಸಿದ್ದಾರೆ.
ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ‘ಮ್ಯಾಕ್ಸ್’ ಸಿನಿಮಾ ಹಿಟ್ ಆಗಲು ಕಾರಣರಾದ ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಥ್ಯಾಂಕ್ಸ್ ಹೇಳಿದ್ದಾರೆ. ‘ನೀವು ತುಂಬ ಸಕ್ಸಸ್ಫುಲ್ ಆಗಿ ಈ ಸಿನಿಮಾವನ್ನು ಓಡಿಸಿದ್ದೀರಿ. ಎರಡೂವರೆ ವರ್ಷದ ನಂತರ ಬಂದಿರುವ ನನ್ನ ಚಿತ್ರದ ಮೇಲೆ ನೀವು ತೋರಿಸಿದ ಪ್ರೀತಿ, ಬೆಂಬಲಕ್ಕೆ ಇಡೀ ತಂಡದ ಪರವಾಗಿ ಧನ್ಯವಾದಗಳು’ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.