‘ದೃಶ್ಯ 2’ ಟ್ರೇಲರ್​ ರಿಲೀಸ್​ ಕಾರ್ಯಕ್ರಮಕ್ಕೆ ಬಂದ ಕಿಚ್ಚ ಸುದೀಪ್​; ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

2014ರ ಜೂನ್​ 20ರಂದು ದೃಶ್ಯ’ ಚಿತ್ರ ತೆರೆಕಂಡಿತ್ತು. ಈಗ ಆ ಚಿತ್ರದ ಸೀಕ್ವೆಲ್​ ಸಿದ್ಧವಾಗಿದೆ. ‘ದೃಶ್ಯ 2’ ಸಿನಿಮಾದಲ್ಲೂ ರವಿಚಂದ್ರನ್​ ಮತ್ತು ನವ್ಯಾ ನಾಯರ್​ ಮುಂದುವರಿದಿದ್ದಾರೆ.

ಕ್ರೇಜಿ ಸ್ಟಾರ್​ ರವಿಚಂದ್ರನ್​ ನಟಿಸಿದ ‘ದೃಶ್ಯ’ ಚಿತ್ರವನ್ನು ಅವರ ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಮರ್ಡರ್​ ಮಿಸ್ಟರಿ ಕಥೆಯುಳ್ಳ ಆ ಸಿನಿಮಾದಲ್ಲಿ ರವಿಚಂದ್ರನ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​ ಆಗಿ ಕಾಣಿಸಿಕೊಂಡಿದ್ದರು. 2014ರ ಜೂನ್​ 20ರಂದು ಆ ಚಿತ್ರ ತೆರೆಕಂಡಿತ್ತು. ಈಗ ಆ ಚಿತ್ರದ ಸೀಕ್ವೆಲ್​ ಸಿದ್ಧವಾಗಿದೆ. ‘ದೃಶ್ಯ 2’ ಸಿನಿಮಾದಲ್ಲೂ ರವಿಚಂದ್ರನ್​ ಮತ್ತು ನವ್ಯಾ ನಾಯರ್​ ಮುಂದುವರಿದಿದ್ದಾರೆ. ಪುತ್ರಿ ಪಾತ್ರದಲ್ಲಿ ನಟಿ ಆರೋಹಿ ನಾರಾಯಣ್​ ಅಭಿನಯಿಸಿದ್ದಾರೆ. E4 Entertainment ಬ್ಯಾನರ್​ನಲ್ಲಿ ‘ದೃಶ್ಯ 2’ ಸಿನಿಮಾ ಮೂಡಿಬಂದಿದೆ. ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಿ.ವಿ. ಸಾರಥಿ ಕೆಲಸ ಮಾಡಿದ್ದಾರೆ. ಜಿ.ಎಸ್.ವಿ. ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ, ಭರತ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ‌. ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: Mohanlal: ‘ಮರಕ್ಕರ್’ ಚಿತ್ರದ ನೂತನ ಟೀಸರ್ ರಿಲೀಸ್; ಅದ್ದೂರಿ ದೃಶ್ಯ ವೈಭವಕ್ಕೆ ಮಾರುಹೋದ ಅಭಿಮಾನಿಗಳು

 

Click on your DTH Provider to Add TV9 Kannada