‘ಹಿಡಿದಿರೋ ದೆವ್ವ ಬಿಡಿಸೋಕೆ ಬರ್ತಿದಾರೆ ಸುದೀಪ್’; ದೊಡ್ಡ ಸೂಚನೆ ಕೊಟ್ಟ ಕಲರ್ಸ್ ಕನ್ನಡ

Updated on: Oct 18, 2025 | 9:00 AM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಯಾವ ರೀತಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂದು ಫ್ಯಾನ್ಸ್ ಕಾದಿದ್ದರು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಒಂದು ಖಡಕ್ ಸಂದೇಶ ಸಿಕ್ಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿಗೆ ಮಾರಿ ಹಬ್ಬ ಇದೆ ಎಂದು ಊಹಿಸಲಾಗಿತ್ತು. ಅದು ನಿಜವಾಗಿದೆ. ‘ದೆವ್ವ ಯಾರು, ದೆವ್ವ ಹಿಡಿಸಿದ್ದು ಯಾರು? ದೆವ್ವ ಬಿಡಿಸೋಕೆ ಬರ್ತಿದ್ದಾರೆ ಕಿಚ್ಚ ಸುದೀಪ್’ ಎಂದು ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಈ ಮೂಲಕ ದೊಡ್ಡ ಸೂಚನೆ ಕೊಡಲಾಗಿದೆ. ಇಂದಿನ ಎಪಿಸೋಡ್​ಗೆ ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More