ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್

Updated on: Jun 13, 2023 | 9:06 PM

Sudeep: ನಟ ಕಿಚ್ಚ ಸುದೀಪ್ ಇಂದು (ಜೂನ್ 13) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.

ನಟ ಸುದೀಪ್ (Sudeep) ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ ಚಾಮುಂಡೇಶ್ವರಿ ತಾಯಿ (Chamundeshwari) ದರ್ಶನ ಪಡೆದರು. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ನೂಕು ನುಗ್ಗಲು ಉಂಟಾಯ್ತು. ಸುದೀಪ್ ಅವರು ದೇವಿಯ ದರ್ಶನ ಪಡೆಯುವಾಗಲು ಸಹ ನೂಕು ನುಗ್ಗಲು ಉಂಟಾಯಿತು. ಇದು ಸ್ವತಃ ಸುದೀಪ್ ಅವರಿಗೆ ಬೇಸರ ತರಿಸಿತು. ಕೆಲವು ಅಭಿಮಾನಿಗಳು ದೇವಾಲಯದ ಆವರಣದಲ್ಲಿ ಸುದೀಪ್ ಪರ ಘೋಷಣೆಗಳನ್ನು ಕೂಗಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More