ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟ ಸುದೀಪ್; ಕಾರಣ ಏನು?

|

Updated on: Feb 06, 2025 | 11:13 AM

ಕಿಚ್ಚ ಸುದೀಪ್ ಅವರು ಸಖತ್ ಬ್ಯುಸಿ ಇದ್ದಾರೆ. ಸಿನಿಮಾ ಕೆಲಸಗಳ ಜೊತೆ ಸಿಸಿಎಲ್​ನಲ್ಲೂ ಅವರು ತೊಡಗಿಕೊಂಡಿದ್ದಾರೆ. ಈಗ ಅವರು ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಏಕಾಏಕಿ ಭೇಟಿ ಕೊಟ್ಟು ಗಮನ ಸೆಳೆದಿದ್ದಾರೆ. ಇದಕ್ಕೆ ಕಾರಣ ಏನು? ಆ ಪ್ರಶ್ನೆಗೆ ಉತ್ತರ ಸಿಸಿಎಲ್​ ಉದ್ಘಾಟನೆ.

ಕಿಚ್ಚ ಸುದೀಪ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಫೆ.8 ರಿಂದ ಬೆಂಗಳೂರಿನಲ್ಲಿ ಸಿಸಿಎಲ್ ಆರಂಭ ಆಗಲಿದೆ. ಇದರ ಉದ್ಘಾಟನೆಗೆ ಡಿಕೆಶಿ ಅವರಿಗೆ ಸುದೀಪ್ ಆಹ್ವಾನ ನೀಡಿದ್ದಾರೆ. ಹೀಗಾಗಿ, ಅವರು ಡಿಕೆಶಿ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಫೆ. 8 ಮತ್ತು 9 ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಗಳು ನಡೆಯಲಿದೆ. ಫೆ.8ರಂದು ಕರ್ನಾಟಕ ಬುಲ್ಡೋಜರ್ ತಂಡದವರು ಹೈದರಾಬಾದ್ ವಿರುದ್ದ ಮೊದಲ ಪಂದ್ಯ ಆಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.