ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

Updated on: Dec 29, 2024 | 6:00 PM

ಕಿಚ್ಚ ಸುದೀಪ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರನ್ನು ನೇರವಾಗಿ ನೋಡಬೇಕು ಎಂಬ ಆಸೆ ಎಲ್ಲ ಅಭಿಮಾನಿಗಳಿಗೂ ಇರುತ್ತದೆ. ಹಾಗಾಗಿ ಸುದೀಪ್ ಹೋದಲ್ಲಿ, ಬಂದಿಲ್ಲ ಸಾಕಷ್ಟು ಜನರು ಸೇರುತ್ತಾರೆ. ಇಂದು (ಡಿಸೆಂಬರ್​ 29) ಮೈಸೂರಿಗೆ ತೆರಳಿದ ಸುದೀಪ್ ಅವರನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು.

ನಟ ಕಿಚ್ಚ ಸುದೀಪ್ ಅವರು ಮ್ಯಾಕ್ಸ್ ಸಿನಿಮಾದ ಗೆಲುವಿನ ಖುಷಿಯಲ್ಲಿ ಇದ್ದಾರೆ. ಈ ನಡುವೆ ಅವರು ಮೈಸೂರಿಗೆ ಭೇಟಿ ನೀಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಸುದೀಪ್ ಅವರನ್ನು ನೋಡಲು ಅಲ್ಲಿ ಜನಸಾಗರವೇ ಸೇರಿದೆ. ಅಭಿಮಾನಿಗಳ ಕಡೆಗೆ ಕಿಚ್ಚ ಕೈ ಬೀಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಸುದೀಪ್ ಅವರ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More