‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

Updated on: Jan 01, 2026 | 1:04 PM

Sudeep New Year Wish: ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಅವರು ಹೊಸ ವರ್ಷದ ಸಂದರ್ಭದಲ್ಲಿ ವಿಶ್ ಮಾಡಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದರಲ್ಲಿ ಅವರು ಹೊಸ ವರ್ಷಕ್ಕೆ ವಿಶ್ ಮಾಡಿದ್ದು ಹೀಗಿತ್ತು.

ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಸುದೀಪ್, ಅಭಿಮಾನಿಗಳಿಗೆ ಹೊಸ ವರ್ಷದ ವಿಶ್ ತಿಳಿಸಿದರು. ‘ನಗ್ತಾ ಇರಿ, ಖುಷಿ ಖುಷಿಯಿಂದ ಇರಿ’ ಎಂದು ಕೋರಿದ್ದಾರೆ. ಅವರ ವಿಶ್​​ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More