Wheel Chair Romeo Movie: ‘ವೀಲ್ ಚೇರ್ ರೋಮಿಯೋ’ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ ಕಿಚ್ಚ ಸುದೀಪ್
Kichcha Sudeep: ‘ವೀಲ್ ಚೇರ್ ರೋಮಿಯೋ’ ಚಿತ್ರ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಇದೀಗ ಚಿತ್ರತಂಡಕ್ಕೆ ಕಿಚ್ಚ ಸುದೀಪ್ ಬೆಂಬಲ ನೀಡಿದ್ದು, ಶುಭ ಹಾರೈಸಿದ್ದಾರೆ.
ಗಾಂಧಿ ನಗರದಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ಕೆಲವೇ ಕೆಲವು ಸಿನಿಮಾಗಳಿಗೆ ಒಳ್ಳೆ ಪ್ರತಿಕ್ರಿಯೆ ಸಿಗ್ತಿದೆ. ಸದ್ಯ ವ್ಹೀಲ್‌ಚೇರ್ ರೋಮಿಯೋ (Wheel Chair Romeo) ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೇ 27ರಂದು ತೆರೆಕಂಡಿರುವ ಚಿತ್ರಕ್ಕೆ ಇದೀಗ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವಿಟರ್ನಲ್ಲಿ ನಟ ಬರೆದುಕೊಂಡಿದ್ದಾರೆ. ‘ಚಿತ್ರದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆಗಳನ್ನು ಕೇಳುತ್ತಿದ್ದೇನೆ. ಚಿತ್ರತಂಡಕ್ಕೆ ಶುಭವಾಗಲಿ’ ಎಂದಿದ್ದಾರೆ ಸುದೀಪ್. ‘ವೀಲ್ಚೇರ್ ರೋಮಿಯೋ’ ಚಿತ್ರದಲ್ಲಿ ರಾಮ್ ಚೇತನ್, ಮಯೂರಿ ಕ್ಯಾತರಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ತಬಲಾ ನಾಣಿ ಸೇರಿದಂತೆ ಖ್ಯಾತ ಕಲಾವಿದರು ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ.
ಇದನ್ನೂ ಓದಿ: ‘ವೀಲ್ ಚೇರ್ ರೋಮಿಯೋ’ ಚಿತ್ರದ ಕತೆ ಸಿಕ್ಕಿದ್ದು ಹೇಗೆ? ಇಲ್ಲಿದೆ ಅಚ್ಚರಿಯ ವಿಚಾರ
ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ