Kidwai Hospital: ಬೆಂಗಳೂರು ಕಿದ್ವಾಯಿ ಅಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು, ಆರೋಗ್ಯ ಸಚಿವರು ಬಿಡುವಿಲ್ಲದೆ ಕೆಲಸ ಮಾಡಬೇಕಿದೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2023 | 5:29 PM

ಆಸ್ಪತ್ರೆಯಲ್ಲಿ ಎಲ್ಲವೂ ಕೆಟ್ಟದಾಗಿದೆ ಅಂತೇನೂ ಅವರು ಹೇಳುತ್ತಿಲ್ಲ. ಆದರೆ, ಏನೇನೆಲ್ಲ ಸುಧಾರಣೆ ಅಗಬೇಕು ಅನ್ನೋದನ್ನು ಅವರು ಬಹಳ ಚೆನ್ನಾಗಿ ವಿವರಿಸುತ್ತಿದ್ದಾರೆ.

ಬೆಂಗಳೂರು: ರಾಜ್ಯದ ಹಲವಾರು ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಚಾಮರಾಜನಗರದ ಜಿಲ್ಲಾಸ್ಪತ್ರೆ ಅವ್ಯವಸ್ಥೆಗಳ ಆಗರ ಅನ್ನೋದನ್ನು ಮತ್ತೊಂದು ವಿಡಿಯೋದಲ್ಲಿ ನೀವು ನೋಡಿದ್ದರೆ. ಇದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ (Kidwai Hospital) ವಾಸ್ತವ ಸ್ಥಿತಿ. ಕ್ಯಾನ್ಸರ್ ಮಾರಣಾಂತಿಕ ಕಾಯಿಲೆ. ಈ ಆಸ್ಪತ್ರೆಗೆ ಬರುವ ರೋಗಿ ಮತ್ತು ಸಂಬಂಧಿಕರ ಮಾನಸಿಕ ಸ್ಥಿತಿಯ (mental state) ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ (treatment) ಇಲ್ಲ ಅಂತೇನೂ ಇಲ್ಲ, ಖಂಡಿತವಾಗಿಯೂ ಇದೆ. ಆದರೆ ಚಿಕಿತ್ಸೆಗೆ ಪೂರಕವಾದ ವಾತಾವರಣ ಇಲ್ಲಿಲ್ಲ ಅಂತ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುವ ರೋಗಿಗಳ ಸಂಬಂಧಿಕರು ಹೇಳುತ್ತಾರೆ. ಎಲ್ಲವೂ ಕೆಟ್ಟದಾಗಿದೆ ಅಂತೇನೂ ಅವರು ಹೇಳುತ್ತಿಲ್ಲ. ಆದರೆ, ಏನೇನೆಲ್ಲ ಸುಧಾರಣೆ ಅಗಬೇಕು ಅನ್ನೋದನ್ನು ಅವರು ಬಹಳ ಚೆನ್ನಾಗಿ ವಿವರಿಸುತ್ತಿದ್ದಾರೆ. ಸಂಬಂಧಪಟ್ಟವರು, ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ಇತ್ತ ಗಮ ಹರಿಸಬೇಕು.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.