AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ

ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 06, 2026 | 12:43 PM

Share

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚುತ್ತಿರುವ ಕುರಿತು ಹುಬ್ಬಳ್ಳಿಯ ಕಿಮ್ಸ್ ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಅಧ್ಯಯನ ನಡೆಸಿದೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳ 8-18 ವರ್ಷದ ಮಕ್ಕಳ ಮೇಲೆ ನಡೆಸಿದ ಸಂಶೋಧನೆಯಲ್ಲಿ 70% ಮಕ್ಕಳಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ಜಂಕ್ ಫುಡ್, ದೈಹಿಕ ಚಟುವಟಿಕೆ ಕೊರತೆ ಮುಖ್ಯ ಕಾರಣವಾಗಿದ್ದು, ತಕ್ಷಣದ ಕ್ರಮಕ್ಕೆ ಕಿಮ್ಸ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ವರದಿ ಸಲ್ಲಿಸಲಿದೆ.

ಬೆಂಗಳೂರು, ಆಗಸ್ಟ್​ 06: ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳವಾಗುತ್ತಿರುವ ಬಗ್ಗೆ ಹುಬ್ಬಳ್ಳಿಯ ಕಿಮ್ಸ್ ಸಂಸ್ಥೆಯು ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಮಹತ್ವದ ಅಧ್ಯಯನ ನಡೆಸಿದೆ. ಡಾ. ರಾಮ್ ಕವಲಗುಡ್ಡ ನೇತೃತ್ವದಲ್ಲಿ ನಡೆದ ಈ ಸಂಶೋಧನೆಯು ಕರ್ನಾಟಕ ಸೇರಿದಂತೆ 13 ರಾಜ್ಯಗಳ ಮಕ್ಕಳಿಗೆ ಸಂಬಂಧಿಸಿದಂತೆ ಆತಂಕಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. 8 ರಿಂದ 18 ವರ್ಷ ವಯಸ್ಸಿನ 347 ಮಕ್ಕಳನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಇದರಲ್ಲಿ ಶೇಕಡಾ 70ರಷ್ಟು ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವಾಗಬಹುದಾದ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ಅದರಲ್ಲಿ ಶೇಕಡಾ 17ರಷ್ಟು ಮಕ್ಕಳಲ್ಲಿ ಹೃದಯದ ಅಪಧಮನಿಗಳ ಒಳಪದರವಾದ ಎಂಡೋಥೀಲಿಯಂ ಹಾನಿಯಾಗಿರುವುದು ಕಂಡುಬಂದಿದೆ.

ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜುತನ, ದೈಹಿಕ ಚಟುವಟಿಕೆಯ ಕೊರತೆ, ಅತಿಯಾದ ಜಂಕ್ ಫುಡ್ ಸೇವನೆ, ಕೋಲ್ಡ್ ಡ್ರಿಂಕ್ಸ್, ಹೆಚ್ಚು ಸಕ್ಕರೆ ಮತ್ತು ಉಪ್ಪಿನ ಆಹಾರ ಸೇವನೆ ಇವೇಲ್ಲವೂ ಈ ಅಪಾಯಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಅಧ್ಯಯನ ವರದಿ ಹೇಳುತ್ತದೆ. ಸೂಕ್ತ ಚಿಕಿತ್ಸೆ ಮತ್ತು ಜೀವನಶೈಲಿ ಬದಲಾವಣೆ ಮಾಡಿಕೊಳ್ಳದಿದ್ದರೆ, ಈ ಮಕ್ಕಳಿಗೆ ಮುಂದಿನ 10-15 ವರ್ಷಗಳಲ್ಲಿ ಹೃದಯಾಘಾತವಾಗುವ ಸಾಧ್ಯತೆಯಿದೆ. ಈ ವರದಿಯನ್ನು ಕಿಮ್ಸ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಲ್ಲಿಸಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us