ಹುಬ್ಬಳ್ಳಿ: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್, ಕಿಮ್ಸ್ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು
ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಣೇಶ ಕೋಡಿಸಿದ್ದರು. ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಅಬ್ಬರ ಜೋರಾಗಿದ್ದು, ಕಿಮ್ಸ್ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿದರು.
ಹುಬ್ಬಳ್ಳಿ ಸೆ.23: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ (KIMS) ವಿದ್ಯಾರ್ಥಿಗಳ ವಿಡಿಯೋವೊಂದು ಇತ್ತೀಚಿಗೆ ವೈರಲ್ ಆಗಿತ್ತು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದಾದ ನಂತರ ವಿದ್ಯಾರ್ಥಿಗಳ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗಣೇಶ (Ganesha) ಕೋಡಿಸಿದ್ದರು. ಶನಿವಾರ ಐದನೇ ದಿನವಾದ ನಿಮಿತ್ತ ಗಣೇಶ ವಿಸರ್ಜನೆ ಮಾಡಿದರು. ಈ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ (DJ) ಅಬ್ಬರ ಜೋರಾಗಿದ್ದು, ಕಿಮ್ಸ್ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿದರು. ಆದರೆ ಆಸ್ಪತ್ರೆ ಆವರಣದಲ್ಲಿಯೇ ಡಿಜೆ ಹಚ್ಚಿದ್ದರಿಂದ ಪೊಲೀಸ್ ಕಮೀಷನರ್ ಇಲ್ಲಿ ಡಿಜೆ ಹಚ್ಚಬೇಡಿ ಎಂದು ವಾರ್ನ್ ಮಾಡಿದ್ದರು. ನೂರಾರು ರೋಗಿಗಳಿದ್ದು, ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್ ಎಂದು ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದರು. ಇದಕ್ಕೆ ಸಾರ್ವಜನಿಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
Published On - 1:19 pm, Sun, 24 September 23