ರಸ್ತೆ ಸರಿಪಡಿಸೋದು ನಮ್ಮ ಅಜೆಂಡಾ ಎಂದ ಉದ್ಯಮಿ ಕಿರಣ್ ಮಜುಂದಾರ್ ಶಾ

Updated on: Oct 19, 2025 | 1:48 PM

ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕಿರಣ್ ಮಜುಂದಾರ್-ಶಾ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ತಮ್ಮ ಮಾತು ಸತ್ಯವಲ್ಲ ಎಂದಿರುವ ಅವರು, ಮೋಹನ್ ದಾಸ್ ಪೈ ಅವರೊಂದಿಗೆ ತಾವು ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳ ಅವಧಿಯಲ್ಲೂ ಬೆಂಗಳೂರಿನ ಹದಗೆಟ್ಟ ಮೂಲಸೌಕರ್ಯಗಳನ್ನು ಟೀಕಿಸಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 19: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ ತೆರೆಯಲಿಲ್ಲ. ಅವರೊಂದಿಗೆ ಇವರು ಕೆಲವು ವೈಯಕ್ತಿಕ ಅಜೆಂಡಾ ಹೊದಿದ್ದಾರೆ ಎಂದಿದ್ದರು. ಈ ಬಗ್ಗೆ ತಿರುಗೇಟು ನೀಡಿರುವ ಉದ್ಯಮಿ ಕಿರಣ್ ಮಜೂಂದಾರ್ ಶಾ, ಡಿಕೆ ಶಿವಕುಮಾರ್​ ಮಾತು ಸತ್ಯವಲ್ಲ. ಪೈ ಮತ್ತು ನಾನು ಇಬ್ಬರೂ ಈ ಹಿಂದಿನಿಂದಲ್ಲೂ ಟೀಕಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 19, 2025 01:47 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More