ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?

Edited By:

Updated on: Sep 11, 2024 | 8:25 PM

ಸಿನಿಮಾದ ಪ್ರಚಾರಕ್ಕಾಗಿ ಹಲವು ತಂತ್ರಗಳನ್ನು ಮಾಡಲಾಗುತ್ತದೆ. ಕಿರಣ್​ ರಾಜ್​ ಕೂಡ ಅದೇ ಹಾದಿ ತುಳಿದಿದ್ದಾರಾ ಎಂಬ ಪ್ರಶ್ನೆ ಕೆಲವರಲ್ಲಿ ಮೂಡಿದೆ. ಈ ಕುರಿತು ಅವರ ಆಪ್ತರು ಪ್ರತಿಕ್ರಿಯೆ ನೀಡಿದ್ದಾರೆ. ರಸ್ತೆ ಅಪಘಾತ ಆಗಿದ್ದು ಎಲ್ಲಿ ಮತ್ತು ಯಾವಾಗ ಎಂಬ ಬಗ್ಗೆ ಗಿರೀಶ್​ ಅವರು ಮಾಹಿತಿ ನೀಡಿದ್ದಾರೆ. ಗಿಮಿಕ್​ ಬಗ್ಗೆ ಎದುರಾದ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ.

‘ನಮ್ಮ ಸಿನಿಮಾದ ಪ್ರೀಮಿಯರ್​ ಶೋ ಇತ್ತು. ಅದನ್ನು ಮುಗಿಸಿ ಆಶ್ರಮಕ್ಕೆ ಹೋಗಿ ಬರುವಾಗ ರಾತ್ರಿ 9.45ರ ಸುಮಾರಿಗೆ ಅಪಘಾತ ಆಯಿತು. ನಾನು ಕಾರು ಓಡಿಸುತ್ತಿದ್ದೆ. ಕಿರಣ್​ ರಾಜ್​ ಹಿಂದೆ ಕುಳಿತಿದ್ದರು. ಇದು ಪ್ರಚಾರದ ಗಿಮಿಕ್ ಅಲ್ಲ. ನಮಗೆ ಮಾಡಲು ಸಾಕಷ್ಟು ಕೆಲಸ ಇದೆ. ತಕ್ಷಣ ನಿರ್ಮಾಪಕರು ಬಂದು ಕಿರಣ್ ರಾಜ್​ ಅವರನ್ನು ಆಸ್ಪತ್ರೆಗೆ ದಾಖಲಿಸಿದರು’ ಎಂದು ಕಿರಣ್​ ರಾಜ್​ ಜೊತೆಗಿದ್ದ ಗಿರೀಶ್​ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More