‘ಆತಂಕ ಬೇಡ, ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಬಗ್ಗೆ ಅಪ್​ಡೇಟ್ ಕೊಟ್ಟ ಕಿರಣ್ ರಾಜ್

Updated on: Sep 11, 2024 | 2:11 PM

‘ಕನ್ನಡತಿ’ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್​ ಅವರಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯದ ಬಗ್ಗೆ ಅವರು ಅಪ್​​ಡೇಟ್ ಕೊಟ್ಟಿದ್ದಾರೆ.

ನಟ ಕಿರಣ್ ರಾಜ್ ಅವರು ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿತ್ತು. ಕಾರಿನ ಮುಂಭಾಗ ಜಖಂ ಆಗಿತ್ತು. ಕಿರಣ್ ರಾಜ್ ಅವರು ಈಗ ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಆರೋಗ್ಯವಾಗಿರೋದಾಗಿ ವಿಡಿಯೋ ಮಾಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಏನು ಆಗಿದೆ ಎನ್ನುವ ಬಗ್ಗೆ ಮಾಹಿತಿ ತಲುಪಿದೆ ಎಂದುಕೊಳ್ಳುತ್ತೇನೆ. ಆತಂಕಗೊಂಡು ಅನೇಕರು ಮೆಸೇಜ್ ಮಾಡಿದ್ದೀರಿ. ನಾನು ಆರಾಮಿಗಿದ್ದೇನೆ. ಸ್ವಲ್ಪ ಏಟಾಗಿತ್ತು. ಡಾಕ್ಟರ್ ಚಿಕಿತ್ಸೆ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ’ ಎಂದು ವಿಡಿಯೋದಲ್ಲಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More