ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?

Updated on: Jan 29, 2026 | 4:24 PM

ಕರ್ನಾಟಕ ಕಾಂಗ್ರೆಸ್​ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ. ಹೌದು... ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ಇಂಥಾದ್ದೊಂದು ಅತಿದೊಡ್ಡ ಬೆಳವಣಿಗೆಯನ್ನ ಟಿವಿ9 ಇಂದು ಬ್ರೇಕ್ ಮಾಡಿದೆ. ಈ ವರದಿ ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ರಾಷ್ಟ್ರದಲ್ಲೂ ದೊಡ್ಡ ಸಂಚಲನ ಎಬ್ಬಿಸಿದೆ. ವಿಧಾನಸಭೆಯಲ್ಲೂ ಟಿವಿ9 ವರದಿ ದೊಡ್ಡ ಸದ್ದು ಮಾಡಿದೆ.

ಬೆಂಗಳೂರು, (ಜನವರಿ 29): ಕರ್ನಾಟಕ ಕಾಂಗ್ರೆಸ್ (Karnataka Congress)​ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ (kj george) ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ. ಹೌದು… ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ಇಂಥಾದ್ದೊಂದು ಅತಿದೊಡ್ಡ ಬೆಳವಣಿಗೆಯನ್ನ ಟಿವಿ9 ಇಂದು ಬ್ರೇಕ್ ಮಾಡಿದೆ. ಈ ವರದಿ ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ರಾಷ್ಟ್ರದಲ್ಲೂ ದೊಡ್ಡ ಸಂಚಲನ ಎಬ್ಬಿಸಿದೆ. ವಿಧಾನಸಭೆಯಲ್ಲೂ ಟಿವಿ9 ವರದಿ ದೊಡ್ಡ ಸದ್ದು ಮಾಡಿದೆ. ತಮ್ಮ ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪ ಮಾಡ್ತಿದ್ದಾರೆ ಎಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಬೇಸರಗೊಂಡಿದ್ದು, ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್​ನ ಮೂಲಗಳು ಟಿವಿ9ಗೆ ತಿಳಿಸಿವೆ. ಆದ್ರೆ, ಇದನ್ನು ಸಚಿವ ಜಾರ್ಜ್ ಅಲ್ಲಗಳೆದಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂಧನ ಇಲಾಖೆಯಲ್ಲಿ ಡಾ.ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ. ವಿಧಾನಸಭೆಯಲ್ಲಿ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ. ಒಬ್ಬ ಸಚಿವರು ರಾಜೀನಾಮೆ ನೀಡುವುದು ಅಷ್ಟು ಸುಲಭವೇ? ನಾನು ಯಾವುದೇ ಅಧಿಕಾರಿ ವಿಚಾರದಲ್ಲಿ ಪಟ್ಟು ಹಿಡಿಯಲ್ಲ. ಡಾ.ಯತೀಂದ್ರ ಒಳ್ಳೆಯವರು. ಅವರಿಗೆ ಯಾಕೆ ಕೆಟ್ಟ ಹೆಸರು? ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.