ಚಿತ್ರದುರ್ಗ: 44 ಪ್ರಯಾಣಿಕರಿದ್ದ ಸಾರಿಗೆ ಬಸ್ ಪಲ್ಟಿ, ತಪ್ಪಿದ ಭಾರಿ ದುರಂತ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ 44 ಪ್ರಯಾಣಿಕರಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿಯಾಗಿದೆ. ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಅಪಘಾತಕ್ಕೀಡಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಐವರು ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದರೊಂದಿಗೆ ದೊಡ್ಡ ದುರಂತ ತಪ್ಪಿದಂತಾಗಿದೆ.
ಚಿತ್ರದುರ್ಗ, ಏಪ್ರಿಲ್ 28: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ (ಕೆಕೆಆರ್‌ಟಿಸಿ) ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 44 ಮಂದಿ ಪ್ರಯಾಣಿಸುತ್ತಿದ್ದರು. ಬಳ್ಳಾರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿದ್ದು, ದೊಡ್ಡ ದುರಂತವೊಂದು ಅದೃಷ್ಟವಶಾತ್ ತಪ್ಪಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಹಿತಿ ಪ್ರಕಾರ, ಐವರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯು ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಸ್ ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
