ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ

Edited By:

Updated on: Feb 08, 2025 | 1:06 PM

ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದ ಬಳಿ ಕೆಕೆಆರ್ಟಿಸಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್ ಚಾಲಕ ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಎಲ್ಲಾ ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ, ಫೆಬ್ರವರಿ 08: ಯಾದಗಿರಿ‌ ಜಿಲ್ಲೆ ವಡಗೇರ ಪಟ್ಟಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕೆಕೆಆರ್​ಟಿಸಿ ಬಸ್ ಪಲ್ಟಿಯಾಗಿದೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಮಧ್ಯೆ ಸ್ಕೀಡ್ ಆಗಿ ಬೈಕ್ ಸವಾರ ಬಿದ್ದಿದ್ದನು. ಬಸ್ ಚಾಲಕ ಬೈಕ್ ಸವಾರರನ್ನು ತಪ್ಪಿಸಲು ಹೋಗಿದ್ದನು. ಈ ವೇಳೆ ಸಾರಿಗೆ ಬಸ್​ ರಸ್ತೆ ಕೆಳಗೆ ಇಳಿದು ಪಲ್ಟಿಯಾಗಿದೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.