AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್: ಹೆಡ್‌ಲೈಟ್ ಇಲ್ಲದೆ 90 ಕಿ.ಮೀ ಪ್ರಯಾಣ!

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್: ಹೆಡ್‌ಲೈಟ್ ಇಲ್ಲದೆ 90 ಕಿ.ಮೀ ಪ್ರಯಾಣ!

ದತ್ತಾತ್ರೇಯ ಪಾಟೀಲ್​
| Edited By: |

Updated on: Jul 05, 2026 | 9:47 AM

Share

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡ್ರೈವರ್ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿದ್ದಾರೆ. 15 ದಿನಗಳಿಂದ ಹೆಡ್‌ಲೈಟ್ ಕೆಟ್ಟು ಹೋಗಿದ್ದರೂ ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುವ ಈ ಬಸ್‌ನಲ್ಲಿ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಲಬುರಗಿ, ಜುಲೈ 05: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದರ ಡ್ರೈವರ್ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಓಡಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯಿಂದ ಚಿಂಚೋಳಿ ಮಾರ್ಗದಲ್ಲಿ ಸಂಚರಿಸುವ ಈ ಬಸ್‌ನಲ್ಲಿ ಕಂಡಕ್ಟರ್ ಮೊಬೈಲ್ ಟಾರ್ಚ್ ಹಿಡಿದರೆ, ಡ್ರೈವರ್​​ ಬಸ್​​ ಚಲಾಯಿಸಿದ್ದಾರೆ. ಕಳೆದ 15 ದಿನಗಳಿಂದ ಈ ಬಸ್‌ನ ಹೆಡ್‌ಲೈಟ್‌ಗಳು ಕೆಟ್ಟು ಹೋಗಿದ್ದರೂ, ಸಾರಿಗೆ ಸಂಸ್ಥೆಯ ಅಧಿಕಾರಿಗಳು ಅದನ್ನು ದುರಸ್ತಿ ಮಾಡಿಸುವ ಗೋಜಿಗೆ ಹೋಗಿಲ್ಲ. ಕಲಬುರಗಿಯಿಂದ ಚಿಂಚೋಳಿ 90 ಕಿಲೋ ಮೀಟರ್​​ ದೂರವಿದ್ದು, ರಾತ್ರಿ ವೇಳೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸುವುದು ಪ್ರಯಾಣಿಕರ ಜೀವಕ್ಕೆ ಆಪತ್ತು ತಂದಿದೆ. ಸಾರಿಗೆ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ಎದುರಾಗಿದೆ.ಕೂಡಲೇ ಸಂಬಂಧಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More