RCB vs DC: ಜನ್ಮ ದಿನದಂದು ಆರ್‌ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್
KL Rahul half-century: ಎಂ. ಚಿನ್ನಸ್ವಾಮಿಯಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿಯನ್ನು ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳಿಂದ ಸೋಲಿಸಿತು. 175 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿಗೆ, ಕೆಎಲ್ ರಾಹುಲ್ (ಹುಟ್ಟುಹಬ್ಬದ ಅರ್ಧಶತಕ) ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಅಮೋಘ ಬ್ಯಾಟಿಂಗ್ ನೆರವಾಯಿತು. ಡೇವಿಡ್ ಮಿಲ್ಲರ್ ಅಂತಿಮ ಓವರ್‌ನಲ್ಲಿ ಸಿಕ್ಸರ್‌ಗಳನ್ನು ಬಾರಿಸಿ ಗೆಲುವು ತಂದುಕೊಟ್ಟರು. ರಾಹುಲ್ ಅವರ 42ನೇ ಐಪಿಎಲ್ ಅರ್ಧಶತಕವು ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣವಾಯಿತು.
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್‌ಸಿಬಿ ನೀಡದ 175 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು.
ವಾಸ್ತವವಾಗಿ ಆರ್‌ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಪ್ರಮುಖ 3 ವಿಕೆಟ್ಗಳು ಮೊದಲ 3 ಓವರ್ಗಳಲ್ಲಿಯೇ ಪತನಗೊಂಡವು. ಆಗ ಡೆಲ್ಲಿ ತಂಡದ ಮೊತ್ತ ಕೇವಲ 18 ರನ್ಗಳಾಗಿದ್ದವು. ಅಲ್ಲಿಂದ ಟ್ರಿಸ್ಟಾನ್ ಸ್ಟಬ್ಸ್ ಜೊತೆಗೂಡಿ ತಂಡದ ಇನ್ನಿಂಗ್ಸ್ ಕಟ್ಟಿದ ಕೆಎಲ್ ರಾಹುಲ್ ತ್ವರಿತವಾಗಿ ರನ್ ಗಳಿಸಿದರು. ಇದರ ಜೊತೆಗೆ ರಾಹುಲ್ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಇದು ಅವರ ವೃತ್ತಿಜೀವನದ 42 ನೇ ಐಪಿಎಲ್ ಅರ್ಧಶತಕವಾಗಿದ್ದರೆ, ಆರ್‌ಸಿಬಿ ವಿರುದ್ಧ ಅವರ ಐದನೇ ಶತಕವೂ ಆಗಿತ್ತು. ಈ ಇನ್ನಿಂಗ್ಸ್ ಅವರ ಹುಟ್ಟುಹಬ್ಬದಂದು ಬಂದಿದ್ದು, ಅದರ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿತ್ತು. ಹಾಗೆಯೇ ಆರ್‌ಸಿಬಿ ಸೋಲಿಗೆ ಪ್ರಮುಖ ಕಾರಣವೂ ಆಯಿತು.