Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ

ಝಾಹಿರ್ ಯೂಸುಫ್
|

Updated on: Mar 27, 2025 | 1:54 PM

IPL 2025 DC vs LSG: ಐಪಿಎಲ್​​ 2025ರ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಒವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.3 ಓವರ್​ಗಳಲ್ಲಿ 211 ರನ್ ಬಾರಿಸಿ 1 ವಿಕೆಟ್​ನಿಂದ ರೋಚಕ ಗೆಲುವು ದಾಖಲಿಸಿತು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2025) ಮೊದಲ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹೊಸ ಉಲ್ಲಾಸದಲ್ಲಿದೆ. ಈ ಉಲ್ಲಾಸ ಉತ್ಸಾಹದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಆಟಗಾರರಿಗೆ ವಿಶೇಷ ಡಿನ್ನರ್ ಪಾರ್ಟಿ ಏರ್ಪಡಿಸಿತ್ತು. ಈ ಪಾರ್ಟಿಯಲ್ಲಿ ಕಾಣಿಸಿಕೊಂಡ ಆಟಗಾರರು ರ್ಯಾಂಪ್​ ವಾಕ್ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ತೊಡಗಿಸಿಕೊಂಡಿದ್ದರು.

ಇದೇ ವೇಳೆ ವೇದಿಕೆ ಮೇಲೆ ಕಾಣಿಸಿಕೊಂಡ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಕೆವಿನ್ ಪೀಟರ್ಸನ್ ಅವರ ಬ್ಯಾಟಿಂಗ್ ಸ್ಟಾನ್ಸ್ ಅನ್ನು ಅನುಕರಿಸುವ ಮೂಲಕ ಗಮನ ಸೆಳೆದರು. ಅಲ್ಲದೆ ಇದು ಯಾರ ಬ್ಯಾಟಿಂಗ್ ನಿಲುವು ಎಂಬುದನ್ನು ಊಹಿಸಬಲ್ಲಿರಾ ಎಂದು ಪ್ರಶ್ನಿಸುತ್ತಿದ್ದಂತೆ, ಇತ್ತ ಕೆವಿನ್ ಪೀಟರ್ಸನ್ ಸೇರಿದಂತೆ ಎಲ್ಲರೂ ಬಿದ್ದು ಬಿದ್ದು ನಗಲಾರಂಭಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಈ ಸಂಭ್ರಮದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಎಲ್ಲರೂ ಕೆಎಲ್ ರಾಹುಲ್ ಅವರ ಮಿಮಿಕ್​ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.