‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ
ಆರ್ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದೆ. ಈ ಮೂಲಕ ಈ ಸೀಸನ್ನಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿದೆ. ಕೆಎಲ್ ರಾಹುಲ್ ಅವರ ಅಮೋಘ ಆಟದಿಂದ ಈ ಗೆಲುವು ಸಿಕ್ಕಿತು. 93 ರನ್ಗಳನ್ನು ಚಚ್ಚಿ ಅವರು ತಂಡಕ್ಕೆ ಆಸರೆ ಆದರು. ಅವರ ಸೆಲೆಬ್ರೇಷನ್ ಈಗ ಗಮನ ಸೆಳೆದಿದೆ.
ಕೆಎಲ್ ರಾಹುಲ್ (KL Rahul) ಕನ್ನಡದ ಹುಡುಗ. ಕರ್ನಾಟಕದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಆರ್ಸಿಬಿ ವಿರುದ್ಧ ಗೆದ್ದ ಬಳಿಕ ಅವರು ಮಾಡಿರೋ ಸೆಲೆಬ್ರೇಷನ್ ವಿಡಿಯೋ ಈಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಾಹುಲ್ ಅವರು, ‘ನಾನು ಇಲ್ಲಿಯವನು, ಬೆಂಗಳೂರು ಹಾರ್ಟ್ನಲ್ಲಿದೆ’ ಎಂಬರ್ಥ ಬರುವ ರೀತಿಯಲ್ಲಿ ತೋರಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ರಾಹುಲ್ ಸೆಲೆಬ್ರೇಷನ್ನ ಕೊಂಡಾಡುತ್ತಿದ್ದಾರೆ. ‘ನಮ್ಮ ಕನ್ನಡದ ಹುಡುಗ’ ಎಂದು ಅವರನ್ನು ಕರೆಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 11, 2025 08:06 AM
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
