‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ

Updated on: Apr 11, 2025 | 9:28 AM

ಆರ್​ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿದೆ. ಈ ಮೂಲಕ ಈ ಸೀಸನ್​ನಲ್ಲಿ ಸತತ ನಾಲ್ಕನೇ ಗೆಲುವು ಸಾಧಿಸಿದೆ. ಕೆಎಲ್​ ರಾಹುಲ್ ಅವರ ಅಮೋಘ ಆಟದಿಂದ ಈ ಗೆಲುವು ಸಿಕ್ಕಿತು. 93 ರನ್​ಗಳನ್ನು ಚಚ್ಚಿ ಅವರು ತಂಡಕ್ಕೆ ಆಸರೆ ಆದರು. ಅವರ ಸೆಲೆಬ್ರೇಷನ್ ಈಗ ಗಮನ ಸೆಳೆದಿದೆ.

ಕೆಎಲ್ ರಾಹುಲ್ (KL Rahul) ಕನ್ನಡದ ಹುಡುಗ. ಕರ್ನಾಟಕದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಆರ್​ಸಿಬಿ ವಿರುದ್ಧ ಗೆದ್ದ ಬಳಿಕ ಅವರು ಮಾಡಿರೋ ಸೆಲೆಬ್ರೇಷನ್ ವಿಡಿಯೋ ಈಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಾಹುಲ್ ಅವರು, ‘ನಾನು ಇಲ್ಲಿಯವನು, ಬೆಂಗಳೂರು ಹಾರ್ಟ್​ನಲ್ಲಿದೆ’ ಎಂಬರ್ಥ ಬರುವ ರೀತಿಯಲ್ಲಿ  ತೋರಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆಯುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ರಾಹುಲ್ ಸೆಲೆಬ್ರೇಷನ್​ನ ಕೊಂಡಾಡುತ್ತಿದ್ದಾರೆ. ‘ನಮ್ಮ ಕನ್ನಡದ ಹುಡುಗ’ ಎಂದು ಅವರನ್ನು ಕರೆಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 11, 2025 08:06 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More