Karnataka Assembly Polls: ಮತಯಾಚನೆಗೆ ಮೊದಲು  ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಮಗನೊಂದಿಗೆ ಶಬರಿಮಲೆಗೆ ಹೊರಟ ಕೆಎಂ ಶಿವಲಿಂಗೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Apr 11, 2023 | 12:56 PM

ಅರಸೀಕೆರೆ ಜನ ಹೇಳುವ ಪ್ರಕಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದರೂ ಶಿವಲಿಂಗೇಗೌಡರು ಗೆಲುವು ಸಾಧಿಸುತ್ತಾರೆ.

ಹಾಸನ: ಜೆಡಿಎಸ್ ಪಕ್ಷಕ್ಕೆ ಇತ್ತೀಚಿಗೆ ಕೊಕ್ ನೀಡಿ ಕಾಂಗ್ರೆಸ್ ಪಕ್ಷ ಸೇರಿರುವ ಶಾಸಕ ಕೆಎಂ ಶಿವಲಿಂಗೇಗೌಡರು (KM Shivalinge Gowda) ತಮ್ಮ ಗೆಲುವಿಗಾಗಿ ಕ್ಷೇತ್ರದಲ್ಲಿ ಕಸರತ್ತು ನಡೆಸಿರುವಂತೆಯೇ ದೇವರ ಮೊರೆ ಕೂಡ ಹೋಗಿದ್ದಾರೆ. ತಮ್ಮ ಪುತ್ರ ಆದರ್ಶ ಗೌಡ ಜೊತೆ ಅವರು ಮಾಲೆ ಧರಿಸಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ (Shabarimale) ತೆರಳಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಶಿವಲಿಂಗೇಗೌಡರು ಅರಸೀಕೆರೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ (Ayyappa Swamy temple) ಮಾಲೆ ಧರಿಸಿದರು. ಹಾಗೆ ನೋಡಿದರೆ, ಅರಸೀಕೆರೆಯಲ್ಲಿ ಶಿವಲಿಂಗೇಗೌಡರು ಜನಪ್ರಿಯ ನಾಯಕರು ಅನ್ನೋದು ನಿರ್ವಿವಾದಿತ. ಜನಗಳು ಹೇಳುವ ಪ್ರಕಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದರೂ ಗೌಡರು ಗೆಲುವು ಸಾಧಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.