Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 24, 2025 | 9:41 PM

ಕರ್ನಾಟಕ ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಹಾಲು ಉತ್ಪಾದಕರ ಮತ್ತು ಒಕ್ಕೂಟಗಳ ಬೇಡಿಕೆಯನ್ನು ಮುಖ್ಯಮಂತ್ರಿಗಳ ಮುಂದಿಡಲಾಗಿದೆ. ಹಾಲಿನ ದರ ಎಷ್ಟು ಏರಿಕೆಯಾಗಬೇಕು ಎಂಬುದನ್ನು ಸಿಎಂ ನಿರ್ಧರಿಸಲಿದ್ದಾರೆ ಎಂದಿದ್ದಾರೆ.

ಬೆಂಗಳೂರು, ಮಾರ್ಚ್​ 24: ನಂದಿನಿ ಹಾಲಿನ ದರ (milk price) ಹೆಚ್ಚಳ ಮಾಡಬೇಕೆಂದು ನಿರ್ಧಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. ಸಿಎಂ ನೇತೃತ್ವದಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಹಾಲಿನ ದರ ಹೆಚ್ಚಳ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರವಾಗುತ್ತೆ. ಹಾಲಿನ ದರ ಎಷ್ಟು ಹೆಚ್ಚಳ ಮಾಡಬೇಕೆಂದು ಸಿಎಂ ಹೇಳುತ್ತಾರೆ. ಹಾಲು ಒಕ್ಕೂಟಗಳು, ಹಾಲು ಉತ್ಪಾದಕರ ಬೇಡಿಕೆ ಮನವರಿಕೆ ಮಾಡಲಾಗಿದೆ. ಹಾಲು ಉತ್ಪಾದಕರು ಮತ್ತು ಗ್ರಾಹಕರು 2 ಕಣ್ಣುಗಳು ಇದ್ದಂತೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆ ಇದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.