ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ರಾಜಣ್ಣ ಮಹತ್ವದ ಘೋಷಣೆ

Updated By: ಗಂಗಾಧರ​ ಬ. ಸಾಬೋಜಿ

Updated on: Dec 06, 2025 | 3:16 PM

ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಕೆ.ಎನ್​.ರಾಜಣ್ಣ, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಯಾರು ನನ್ನ ಪರವಾಗಿ ಹೋರಾಟ ಮಾಡುತ್ತಾರೆ ಅವರಿಗೆ ನಾನು ಚಿರಖುಣಿ. ನನಗೆ ಅಧಿಕಾರದ ದಾಹ ಇಲ್ಲ ಎಂದಿದ್ದಾರೆ.

ತುಮಕೂರು, ಡಿಸೆಂಬರ್​ 06: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು  ಕಾಂಗ್ರೆಸ್ ಶಾಸಕ ಕೆ.ಎನ್​.ರಾಜಣ್ಣ ಹೇಳಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.