‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್​ ಬಗ್ಗೆ ಕೆ.ಎನ್.ರಾಜಣ್ಣ ಮಾತು

Updated on: Jun 19, 2023 | 8:18 AM

ಕಿಚ್ಚ ಸುದೀಪ್ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ (Sudeep) ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಅವರು ಸ್ಟಾರ್ ಪ್ರಚಾರಕರಾಗಿ ಎಂಟ್ರಿ ಕೊಟ್ಟ ಹೊರತಾಗಿಯೂ ಬಿಜೆಪಿಗೆ ಹೆಚ್ಚಿನ ಲಾಭ ಆಗಿಲ್ಲ. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ. ‘ರಾಜ್​ಕುಮಾರ್ (Rajkumar) ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ಆದರೆ, ಅವರು ರಾಜಕೀಯದಿಂದ ದೂರ ಉಳಿದರು. ಇದಕ್ಕೆ ಅವರನ್ನು ದೇವತಾಮನುಷ್ಯ ಎನಿಸಿಕೊಂಡರು. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More