Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್ ನೋಡಿ
ದಕ್ಷಿಣ ಮಂದಾಕಿನಿ ಕಾವೇರಿ ನದಿ ಕೊಡಗು ಮತ್ತು ಹಳೇ ಮೈಸೂರು ಭಾಗದ ಜೀವನಾಡಿಯಾಗಿದೆ. ಇಂದು (ಅ.17) ಬೆಳಗ್ಗೆ 7.40ರ ಸುಮಾರಿಗೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರಿ ತೀರ್ಥೋದ್ಭವಕ್ಕೆ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಬ್ರಹ್ಮಕುಂಡಿಕೆ ಬಳಿ ಸೇರಿದ್ದಾರೆ.
ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಇಂದು (ಅ.17) ತೀರ್ಥೋದ್ಭವ ಆಗಿದೆ. ಬೆಳಗ್ಗೆ 7.40ರ ಸುಮಾರಿಗೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ. ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.
Published on: Oct 17, 2024 07:10 AM
Latest Videos