ವಿರಾಜಪೇಟೆಯಲ್ಲಿ ಹುಲಿ ದಾಳಿ: ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ

ವಿರಾಜಪೇಟೆಯಲ್ಲಿ ಹುಲಿ ದಾಳಿ: ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಹಗಲು-ರಾತ್ರಿ ಕಾರ್ಯಾಚರಣೆ

Edited By:

Updated on: Nov 28, 2026 | 9:34 PM

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿದೆ. ಕಳೆದ ಒಂದು ವಾರದಿಂದ ವಿರಾಜಪೇಟೆ ವಲಯದಲ್ಲಿ ಹುಲಿ ದಾಳಿ ನಡೆಸುತ್ತಿದ್ದರಿಂದ, ಅರಣ್ಯ ಇಲಾಖೆಯು ಮೈತಾಡಿ ಮತ್ತು ಹಾಲುಗುಂದ ಪ್ರದೇಶಗಳಲ್ಲಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿರಾಜಪೇಟೆ ಆರ್‌ಎಫ್‌ಒ ಶಿವರಾಮ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಕೊಡಗು, ನವೆಂಬರ್​​ 28: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನಲ್ಲಿ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಬೃಹತ್ ಕಾರ್ಯಾಚರಣೆ ಕೈಗೊಂಡಿದೆ. ಕಳೆದ ಒಂದು ವಾರದಿಂದ ವಿರಾಜಪೇಟೆ ವಲಯದಲ್ಲಿ ಹುಲಿ ದಾಳಿ ನಡೆಸುತ್ತಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ವಿರಾಜಪೇಟೆ ತಾಲ್ಲೂಕಿನ ಮೈತಾಡಿ ಮತ್ತು ಹಾಲುಗುಂದ ಗ್ರಾಮಗಳ ಸುತ್ತಮುತ್ತ ಅರಣ್ಯ ಇಲಾಖೆ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ಹುಲಿಯನ್ನ ಆದಷ್ಟು ಬೇಗ ಸೆರೆ ಹಿಡಿಯುವ ನಿಟ್ಟಿನಲ್ಲಿ ಮುಂದಾಗಿದ್ದಾರೆ. ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಶಿವರಾಮ್ ನೇತೃತ್ವದಲ್ಲಿ 25ಕ್ಕೂ ಅಧಿಕ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಅರಣ್ಯದ ಪ್ರತಿ ಮೂಲೆ ಶೋಧಿಸಲಾಗಿದ್ದು ಹುಲಿ ಚಲನವಲನಗಳನ್ನ ಪತ್ತೆ ಹಚ್ಚುವ ಪ್ರಯತ್ನ ನಡೆಸಲಾಗುತ್ತಿದೆ. ಜನವಸತಿ ಪ್ರದೇಶಗಳಿಗೆ ಬರದಂತೆ ನಿಗಾವಹಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗೋಪಾಲ್​ ಸೋಮಯ್ಯ