AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ

ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ

Gopal AS
| Edited By: |

Updated on:Feb 27, 2026 | 9:17 PM

Share

ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದಲ್ಲಿ ಹಿಂದೂ ಸಂಗಮ ಯಾತ್ರೆ ಸಿದ್ಧತೆ ವೇಳೆ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆಯಾಗಿದೆ. ಸುಹೈಲ್, ಸಿದ್ಧಿಕ್ ಎಂಬ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಗಾಯಗೊಂಡ ಗೌತಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಖಂಡಿಸಿ ಹಿಂದೂ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ, ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಕೊಡಗು, ಫೆಬ್ರವರಿ 27: ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿ ದಿನ ಮೆರವಣಿಗೆ ವೇಳೆ ನಡೆದ ಕಲ್ಲು, ಚಪ್ಪಲಿ ತೂರಾಟ ಪ್ರಕರಣ ನಗರದಲ್ಲಿ ಕಿಚ್ಚು ಹಚ್ಚಿಸಿದೆ. ಘಟನೆ ನಡೆದ ಏಳು ದಿನವಾದರೂ ಕಾವು ಆರಿಲ್ಲ. ಈ ಮಧ್ಯೆ ಇತ್ತ ಹಿಂದೂ ಸಂಗಮ‌ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ‌ ಮಾಡಿರುವ ಆರೋಪ ಕೇಳಿಬಂದಿದೆ. ಹಿಂದೂ ಸಂಗಮ ಯಾತ್ರೆಗೆ ಸಿದ್ಧತೆ ವೇಳೆ ಮುಸ್ಲಿಂ ಯುವಕರಿಂದ ಕಾರ್ಯಕರ್ತನ ಮೇಲೆ ಹಲ್ಲೆ‌ ಮಾಡಲಾಗಿದೆ. ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಚ್ಚಿರ ಗೌತಮ್ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಹೈಲ್ ಹಾಗೂ ಸಿದ್ಧಿಕ್ ಎಂಬವವರಿಂದ ಹಲ್ಲೆ  ನಡೆಸಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಹಲ್ಲೆ ಖಂಡಿಸಿ ಹಿಂದೂ ಕಾರ್ಯಕರ್ತರಿಂದ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಶಿದ್‌, ಸಿದ್ಧಿಕ್, ಸುಹೇಲ್‌, ನಾಫಿ ವಿರುದ್ಧ ನಾಪೋಕ್ಲು ಪೊಲೀಸ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಿದ್ದಾರೆ. ಗ್ರಾಮದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 27, 2026 08:12 PM
Follow Us