ಕೊಡಗಿನಲ್ಲಿ ಮುಂದುವರಿದ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ಪ್ರವಾಹದ ಕಾರಣ ಸ್ನಾನಘಟ್ಟದಲ್ಲಿ ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ.
ಕೊಡಗು, ಆಗಸ್ಟ್ 03: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದ್ದು, ಪ್ರವಾಹದ ಕಾರಣ ಸ್ನಾನಘಟ್ಟದಲ್ಲಿ ಪಿಂಡಪ್ರದಾನ ಕಾರ್ಯಕ್ಕೆ ಅಡ್ಡಿಯುಂಟಾಗಿದೆ.
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದ ರಸ್ತೆ ಹಾಗೂ ಮಡಿಕೇರಿ ತಾಲೂಕಿನ ಹೊದವಾಡ ರಸ್ತೆ ಸಂಪೂರ್ಣ ಮುಳುಗಡೆಯಾಗಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ. ಜಿಲ್ಲೆಯ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೀವ್ರ ತೊಡಕು ಉಂಟಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 03, 2026 10:07 AM
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
