ಕೊಡಗು: ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಮುಖ್ಯಾಂಶಗಳು
- ಮಲ್ಲಳ್ಳಿ ಜಲಪಾತಕ್ಕೆ ತೆರಳುವಾಗ ಪಲ್ಟಿಯಾದ ಬಸ್
- 22ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯ
- ಗಾಯಾಳುಗಳಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ಪ್ರವಾಸಿಗರ ಬಸ್ ಪಲ್ಟಿಯಾಗಿದೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 22ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗು, ಆಗಸ್ಟ್ 10: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರಿದ್ದ ಬಸ್ ಪಲ್ಟಿ ಆಗಿದ್ದು, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಬಳಿ ನಡೆದಿದೆ. ಮಲ್ಲಳ್ಳಿ ಜಲಪಾತಕ್ಕೆ ತೆರಳುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡ ಕೆಲವು ಪ್ರಯಾಣಿಕರನ್ನು ತಕ್ಷಣವೇ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 10, 2026 05:48 PM
Follow Us
Latest Videos
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್ಶಿಪ್ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್
