Real Estate Mafia In Kodagu: ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖಾ ಅನುಮತಿ ಪಡೆಯದೆ ಬೃಹತ್ ಬೆಟ್ಟವನ್ನು ಬಗೆದು, ಬೆಟ್ಟದ ಬುಡದಲ್ಲೇ ಡೈನಮೈಟ್ ಸ್ಫೋಟಿಸಲಾಗಿದೆ. ಬೆಟ್ಟದ ಮೇಲಿನಿಂದ ಹರಿಯುತ್ತಿದ್ದ ನೀರಿನ ಮೂಲವನ್ನೇ ಬಂದ್ ಮಾಡಿರುವ ಆರೋಪ ಕೇಳಿಬಂದಿದೆ. ಇದರಿಂದ ಮಳೆಗಾಲದಲ್ಲಿ ಭಾರೀ ಭೂ ಕುಸಿತ ಸಂಭವಿಸುವ ಆತಂಕ ವ್ಯಕ್ತವಾಗಿದ್ದು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಪಂಚಾಯಿತಿ ಮೌನ ವಹಿಸಿರುವುದನ್ನು ಖಂಡಿಸಿದ ಗ್ರಾಮಸ್ಥರು, ಕಾಮಗಾರಿ ತಕ್ಷಣ ತಡೆಯುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಕೊಡಗು, ಫೆಬ್ರುವರಿ 02: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಂಬಟ್ಟಿ ಬೆಟ್ಟದಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಅಟ್ಟಹಾಸ ಮಿತಿ ಮೀರಿದೆ. ರೆಸಾರ್ಟ್ ಹಾಗೂ ವಿಲ್ಲಾಗಳ ನಿರ್ಮಾಣಕ್ಕಾಗಿ ಯಾವುದೇ ಇಲಾಖಾ ಅನುಮತಿ ಪಡೆಯದೆ ಬೃಹತ್ ಬೆಟ್ಟವನ್ನು ಬಗೆದು, ಬೆಟ್ಟದ ಬುಡದಲ್ಲೇ ಡೈನಮೈಟ್ ಸ್ಫೋಟಿಸಲಾಗಿದೆ. ಬೆಟ್ಟದ ಮೇಲಿನಿಂದ ಹರಿಯುತ್ತಿದ್ದ ನೀರಿನ ಮೂಲವನ್ನೇ ಬಂದ್ ಮಾಡಿರುವ ಆರೋಪ ಕೇಳಿಬಂದಿದೆ. ಇದರಿಂದ ಮಳೆಗಾಲದಲ್ಲಿ ಭಾರೀ ಭೂ ಕುಸಿತ ಸಂಭವಿಸುವ ಆತಂಕ ವ್ಯಕ್ತವಾಗಿದ್ದು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಪಂಚಾಯಿತಿ ಮೌನ ವಹಿಸಿರುವುದನ್ನು ಖಂಡಿಸಿದ ಗ್ರಾಮಸ್ಥರು, ಕಾಮಗಾರಿ ತಕ್ಷಣ ತಡೆಯುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
