ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ

Edited By:

Updated on: Feb 18, 2026 | 10:31 PM

ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್​ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ ರಾಜ್ಯ ರಾಜಕೀಯ, ರಾಜ್ಯ ಕಾಂಗ್ರೆಸ್ ಪಕ್ಷದ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ.

ದೇವನಹಳ್ಳಿ, (ಫೆಬ್ರವರಿ 18): ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್​ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ ರಾಜ್ಯ ರಾಜಕೀಯ, ರಾಜ್ಯ ಕಾಂಗ್ರೆಸ್ ಪಕ್ಷದ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ.

ಇನ್ನು ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಅವರು, ನಾನು ಈ ಮೊದಲೇ ಹೇಳಿದ್ದೆ ಸಂಕ್ರಾಂತಿ ನಂತರ ಬಜೆಟ್ ಆಗುತ್ತೆ ಅಂತ. ಯುಗಾದಿ ನಂತರ ಅವರಾಗೆ ಅಧಿಕಾರ ಬಿಟ್ಟರೆ ಬದಲಾವಣೆ ಆಗುತ್ತೆ. ರಾಜಕಾರಣದಲ್ಲಿ ಸದ್ಯಕ್ಕೆ ಯಾವುದೇ ಪ್ರಾಬ್ಲಮ್ ಇಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.

ನಾನು ಶಿವರಾತ್ರಿಗೆ ಕಾಶಿ ವಿಶ್ವನಾಥನ ದರ್ಶನಕ್ಕೆ ಹೋಗಿದ್ದೆ. ಪ್ರಯಾಗಕ್ಕೆ ಹೋಗಿದ್ದು, ಕರ್ನಾಟಕಕ್ಕೆ ಸುಖ ಶಾಂತಿ ಮಳೆ ಬೆಳೆಯಾಗಲಿ ಅಂತ ಪ್ರಾರ್ಥನೆ ಮಾಡಿದೆ. ಈ ವರ್ಷದಲ್ಲಿ ಕರ್ನಾಟಕ ರಾಜ್ಯಕ್ಕೆ ಮಳೆ ಬೆಳೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಗತ್ತಿನಾದ್ಯಂತೆ ಸಮಸ್ಯೆ ಇರಲಿದೆ. ಈ ಹಿಂದೆ ಆದಂತಹ ಅವಾಂತರಗಳಿಗಿಂತ ಹೆಚ್ಚಿನ ಹಾನಿ ಆಗುತ್ತೆ. ಯುದ್ಧ ಆಗುವ ಲಕ್ಷಣಗಳು ಸಹ ಇವೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More